ಕಲಾ ಸಾಧಕರಿಗೆ ‘ ಚಿತ್ರಕಲಾ ಸಮ್ಮಾನ್ ‘ ಪ್ರದಾನ

Share This

ಕರ್ನಾಟಕ ಚಿತ್ರಕಲಾ ಪರಿಷತ್ ಪ್ರತಿವರ್ಷ ಆಯೋಜಿಸುವ ಚಿತ್ರಸಂತೆಯ 22ನೇ ಆವೃತ್ತಿ ಜನವರಿ 5, ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಲಾ ಸಾಧಕರಿಗೆ ನೀಡಲಾಗುವ ‘ಚಿತ್ರಕಲಾ ಸಮ್ಮಾನ್’ ಪ್ರಶಸ್ತಿಯನ್ನು ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಪ್ರಸಕ್ತ ಸಾಲಿನ ಡಿ.ದೇವರಾಜು ಅರಸು ಪ್ರಶಸ್ತಿಯನ್ನು ಡಾ.ಎಂ.ಎಸ್.ಮೂರ್ತಿ ಅವರಿಗೆ, ಕೆ.ಎಸ್.ನಾಗರತ್ನಮ್ಮ ಪ್ರಶಸ್ತಿಯನ್ನು ಎ.ರಾಮಕೃಷ್ಣಪ್ಪ ಅವರಿಗೆ, ವೈ. ಸುಬ್ರಮಣ್ಯ ರಾಜು ಪ್ರಶಸ್ತಿಯನ್ನು ಜಿ.ಎಲ್.ಭಟ್ ಅವರಿಗೆ, ಎಚ್.ಕೆ.ಕೇಜ್ರಿವಾಲ್ ಪ್ರಶಸ್ತಿಯನ್ನು ಸೂರ್ಯಪ್ರಕಾಶ್ ಗೌಡ ಅವರಿಗೆ, ಎಂ. ಆರ್ಯಮೂರ್ತಿ ಪ್ರಶಸ್ತಿಯನ್ನು ನಿರ್ಮಲ ಕುಮಾರಿ ಸಿ.ಎಸ್. ಅವರಿಗೆ ನೀಡಿ ಗೌರವಿಸಲಾಯಿತು.
ಶನಿವಾರ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಎನ್‌ಜಿಎಂಎ ನವದೆಹಲಿ ಮಹಾನಿರ್ದೇಶಕರಾದ ಡಾ.ಸಂಜೀವ್ ಕಿಶೋರ್ ಗೌತಮ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಡಾ.ಬಿ.ಎಲ್.ಶಂಕರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಪ್ರಶಸ್ತಿ ವಿಜೇತ ಕಲಾವಿದರಿಗೆ ಅಭಿನಂದನೆಗಳು 💐
| ಇಂದು 22ನೇ ಚಿತ್ರಸಂತೆ |
ಬಹು ನಿರೀಕ್ಷಿತ ಚಿತ್ರಸಂತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಬೆಳಗ್ಗೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಲಾಪ್ರದರ್ಶನ ಉದ್ಘಾಟಿಸಲಿದ್ದಾರೆ. ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್, ಶಾಸಕ ಎಸ್.ಟಿ.ಸೋಮಶೇಖರ್, ಶಾಸಕ ರಿಜ್ವಾನ್ ಅರ್ಹದ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Share This

Leave a Reply

Your email address will not be published. Required fields are marked *